ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಅಸ್ಸಾಂ ಗಣ ಪರಿಷತ್(ಎಜಿಪಿ) ಜತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಬಿಜೆಪಿ ಅಧ್ಯಕ್ಷ ರಾಜ್‌ನಾಥ್ ಸಿಂಗ್ ವ್ಯಕ್ತಪಡಿಸಿದ್ದಾರೆ. 14 ಲೋಕಸಭಾ ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಿಜೆಪಿ ಎಂಟು ಹಾಗೂ ಎಜಿಪಿ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಅವರು ಹೇಳಿದರು. |