ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ವರಿಷ್ಠೆ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಏಕಾಂಗಿಯಾಗಿ ಹೋರಾಟ ನಡೆಸಲಿದೆ. ಆ ನಿಟ್ಟಿನಲ್ಲಿ ಬೇರೆ ಯಾವುದೇ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಯಾವತಿ ಅವರು ಬಿಎಸ್ಪಿ ಸ್ಥಾಪಕ ಕಾನ್ಶಿರಾಮ್ ಅವರ ಜನ್ಮದಿನಾಚರಣೆಯ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಭಾರತೀಯ ಜನತಾ ಪಕ್ಷ ಹಾಗೂ ಕಾಂಗ್ರೆಸ್ ಎರಡೂ ಶ್ರೀಮಂತರ ಪಕ್ಷ ಎಂದು ಜರೆದ ಅವರು, ಅವೆರಡೂ ಪಕ್ಷಗಳಲ್ಲಿ ಸಾಮಾನ್ಯರಿಗೆ ಬೆಲೆ ಇಲ್ಲ ಎಂದು ದೂರಿದರು. ಈ ಸಂದರ್ಭದಲ್ಲಿ ಪಕ್ಷ ಕಡಿಮೆ ಮಾತನಾಡುವ ಮೂಲಕ, ಪಕ್ಷ ಮುಂದಿನ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿರೀಕ್ಷೆ ಹೊಂದಿರುವುದಾಗಿ ಹೇಳಿದರು. |