ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ತೃತೀಯ ಮೈತ್ರಿಕೂಟ ಪ್ರಧಾನಿ ಅಭ್ಯರ್ಥಿಯಾಗಿ ಬಿಎಸ್ಪಿ ಪಕ್ಷದ ನಾಯಕಿ ಮಾಯಾವತಿ ಅಲ್ಲ ಎಂದು ತೆಲುಗುದೇಶಂ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಹೇಳಿಕೆ ನೀಡಿದ್ದಾರೆ. ಚುನಾವಣೆಯ ಬಳಿಕವಷ್ಟೇ ಸರ್ವಸಮ್ಮತ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದೇವೆ ಎಂದು ಸಹ ಅವರು ಹೇಳಿದ್ದಾರೆ. |