ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ತನ್ನ ಮೈತ್ರಿಯನ್ನು ಮತ್ತೊಮ್ಮೆ ದೃಢೀಕರಿಸಿದ ಅಸ್ಸಾಂ ಗಣ ಪರಿಷತ್(ಎಜಿಪಿ) ತಾನು ತೃತೀಯ ರಂಗವನ್ನು ಬೆಂಬಲಿಸುವುದಿಲ್ಲವೆಂದು ಹೇಳಿದೆ. ಭಾರತೀಯ ಜನತಾ ಪಕ್ಷದೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡಿದ್ದು, ಇದೇ ಒಪ್ಪಂದ ಮುಂದುವರಿಯುತ್ತದೆ ಎಂದು ಎಜಿಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಪ್ರಫುಲ್ಲ ಕುಮಾರ್ ಮಹಂತ ಸುದ್ದಿಗಾರರಿಗೆ ತಿಳಿಸಿದರು. |