ಪಿಲಿಭಿತ್ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಸ್ಲಿಮರ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿರುವ ಕ್ರಮದಿಂದ ಕೋಪಗೊಂಡಿರುವ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷ ಜೆಡಿ(ಯು) ವರುಣ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿವೆ.
ವರುಣ್ ಆವರ ಹೇಳಿಕೆಗಳು ಆಘಾತಕಾರಿ ಎಂಬುದಾಗಿ ಬಿಜೆಪಿ ನಾಯಕ ಶಹನವಾಜ್ ಹುಸೇನ್ ಹೇಳಿದ್ದು, ಅವರು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ವೇಳೆ ಅಭ್ಯರ್ಥಿಗಳು ತಮ್ಮ ಭಾಷಣದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.
ವರುಣ್ ಭಾಷಣದ ಕುರಿತು ಚುನಾವಣಾ ಆಯೋಗವು ಪರಿಶೀಲನೆ ನಡೆಸಿ ನ್ಯಾಯಯುತ ವಿಚಾರಣೆ ನಡೆಸಬೇಕು ಎಂದು ಬಿಜೆಪಿಯ ಮಿತ್ರಪಕ್ಷವಾಗಿರುವ ಜೆಡಿಯು ಪಕ್ಷದ ನಾಯಕ ಶಿವಾನಂದ ತಿವಾರಿ ಒತ್ತಾಯಿಸಿದ್ದಾರೆ. |