ಖ್ಯಾತ ನೃತ್ಯಗಾತಿ ಮಲ್ಲಿಕಾ ಸಾರಾಭಾಯ್ ಅವರು ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಎಲ್.ಕೆ. ಆಡ್ವಾಣಿ ವಿರುದ್ಧ ಸ್ಫರ್ಧಿಸುವುದಾಗಿ ಹೇಳಿದ್ದಾರೆ.
ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಪಟುವಾಗಿರುವ ಮಲ್ಲಿಕಾ, ಅವರು ಗೋಧ್ರಾ ಗಲಭೆಯ ಬಳಿಕ ಗುಜರಾತ್ ನರೇಂದ್ರ ಮೋದಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದರು.
ಆಡ್ವಾಣಿ ವಿರುದ್ಧ ಅಭ್ಯರ್ಥಿ ಯಾರು ಎಂಬುದನ್ನು ಕಾಂಗ್ರೆಸ್ ಇನ್ನೂ ಘೋಷಿಸಿಲ್ಲ. ಅದಾಗ್ಯೂ, ಪಕ್ಷವು ಸ್ಥಳೀಯ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದಾಗಿ ಕಾಂಗ್ರೆಸ್ ಹೇಳಿದೆ. 1999 ಚುನಾವಣೆಯಲ್ಲಿ ಕಾಂಗ್ರೆಸ್ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರನ್ನು ಕಣಕ್ಕಿಳಿಸಿತ್ತು. |