ಒರಿಸ್ಸಾದಲ್ಲಿ ಮಾರ್ಚ್ 11ರಂದು ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ಅವರು ವಿಶ್ವಾಸಮತ ಗೆದ್ದಿರುವ ಬೆಳವಣಿಗೆಗಳ ಕುರಿತು ರಾಜ್ಯಾಪಾಲ ಎಂ.ಸಿ. ಭಂಡಾರೆ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ವರದಿ ಸಲ್ಲಿಸಿದ್ದಾರೆ.
ಧ್ವನಿಮತದ ಆಧಾರದಲ್ಲಿ ಪಟ್ನಾಯಕ್ ವಿಶ್ವಾಸಮತ ಗೆದ್ದಿದ್ದಾರೆ ಎಂದು ಸ್ಪೀಕರ್ ಘೋಷಿಸಿದ್ದು, ಇಡಿಯ ಪ್ರಕ್ರಿಯೆ ಅಸಾಂವಿಧಾನಿಕ ಎಂಬುದಾಗಿ ವಿರೋಧ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಬಿಜೆಪಿ ಆಪಾದಿಸಿದ್ದವು.
ರಾಜ್ಯಪಾಲರು ಬುಧವಾರ ರಾಷ್ಟ್ರಪತಿಗಳನ್ನು ಭೇಟಿಯಾಗಿ ವರದಿ ಸಲ್ಲಿಸಿದ್ದಾರೆ ಎಂಬುದಾಗಿ ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.
ಈ ವರದಿಯನ್ನು ಪ್ರಧಾನ ಮಂತ್ರಿಗಳ ಕಚೇರಿ ಹಾಗೂ ಗೃಹ ಸಚಿವಾಲಯಕ್ಕೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವರದಿಯಲ್ಲಿ ರಾಜ್ಯಪಾಲರು ವಿಶ್ವಾಸಮತ ಯಾಚನೆ ಪ್ರಕ್ರಿಯೆ ನ್ಯಾಯ ಸಮ್ಮತವಾಗಿ ನಡೆದಿಲ್ಲವೆಂದು ಅಭಿಪ್ರಾಯಿಸಿದ್ದಾರೆ ಎಂದು ಹೇಳಲಾಗಿದ್ದು, ಒರಿಸ್ಸಾದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. |