ಕಳೆದ ನವೆಂಬರ್ 26ರಂದು ಮುಂಬೈಯಲ್ಲಿ ನಡೆಸಲಾಗಿರುವ ಉಗ್ರವಾದಿ ದಾಳಿಯ ವೇಳೆ ಜೀವಂತ ಸೆರೆಸಿಕ್ಕಿರುವ ಉಗ್ರಗಾಮಿ ಅಜ್ಮಲ್ ಅಮೀರ್ ಕಸಬ್‌ಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಕೋರಿದ್ದಾರೆ.
"ಇದು ಅತ್ಯಂತ ಅಪರೂಪದ ನರಮೇಧ ಪ್ರಕರಣವಾಗಿದ್ದು, ಆದ್ದರಿಂದ ಉಗ್ರ ಕಸಬ್‌ಗೆ ಗಲ್ಲು ಶಿಕ್ಷೆಯನ್ನು ವಿಧಿಸುವಂತೆ ನ್ಯಾಯಾಲಯವನ್ನು ಮನವಿ ಮಾಡಿಕೊಳ್ಳಲಾಗಿದೆ" ಎಂದು ಮಹಾರಾಷ್ಟ್ರ ರಾಜ್ಯ ಗೃಹ ಸಚಿವ ಜಯಂತ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರು ಉಗ್ರ ಕಸಬ್‌ನ ವಿಚಾರಣೆ ತ್ವರಿತಗೊಳಿಸಿ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಗೃಹ ಸಚಿವರು ಹೇಳಿಕೆಯನ್ನು ಸ್ಪಷ್ಟಪಡಿಸಿದ್ದಾರೆ.
|