ಭಾರತೀಯ ತಂಡದ ಮಾಜಿ ಕ್ರಿಕೆಟಿಗ ಮದನ್ ಲಾಲ್ ಕಾಂಗ್ರಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಮದನ್ ಹಿಮಾಚಲ ಪ್ರದೇಶದ ಹಮೀರ್‌ಪುರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯಲಿದ್ದಾರೆ. ಮದನ್ ಲಾಲ್ 1983ನೇ ಇಸವಿಯಲ್ಲಿ ಕಪಿಲ್ ನೇತೃತ್ವದ ವಿಶ್ವಕಪ್ ವಿಜೇತ ಭಾರತ ತಂಡದ ಪ್ರಮುಖ ಆಲ್‌ರೌಂಡರ್ ಆಟಗಾರನಾಗಿದ್ದರು. |