ಅಸ್ಸಾಂನ ಲಾಲ್‌ಗಣೇಶ್ ಪ್ರದೇಶದ ಹೊಟೇಲೊಂದರ ಸಮೀಪ ಬಾಂಬ್ ಒಂದು ಸ್ಫೋಟಗೊಂಡ ಪರಿಣಾಮ ಕನಿಷ್ಠ ಒಬ್ಬ ಬಲಿಯಾಗಿದ್ದು, 13 ಮಂದಿ ಗಾಯಗೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಪ್ರಣಬ್ ಮುಖರ್ಜಿ ಸ್ಥಳಕ್ಕೆ ಆಗಮಿಸುವ ಕೆಲವೇ ನಿಮಿಷಗಳ ಮೊದಲು ಸ್ಫೋಟ ಸಂಭವಿಸಿರುವುದಾಗಿ ಹೇಳಲಾಗಿದೆ. |