ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಪಿ.ಚಿದಂಬರಂಗೆ ಕೇಂದ್ರ ಮುಖ್ಯ ಚುನಾವಣಾ ಆಯೋಗ ಭಾನುವಾರ ನೋಟಿಸ್ ಜಾರಿ ಮಾಡಿದೆ.ರಾಜಸ್ತಾನದಲ್ಲಿ ಚುನಾವಣಾ ಭದ್ರತಾ ಸಭೆ ನಡೆಸಿದ್ದು, ಆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅದಕ್ಕೆ ವಿವರಣೆ ನೀಡಬೇಕೆಂದು ಕೋರಿ ಚುನಾವಣಾ ಆಯೋಗ ಗೃಹಮಂತ್ರಿಗೆ ನೋಟಿಸ್ ಜಾರಿಗೊಳಿಸಿರುವುದಾಗಿ ಹೇಳಿದೆ.ಕಳೆದ ವಾರ ಗೃಹಮಂತ್ರಿ ಚಿದಂಬರಂ ಅವರು ಭದ್ರತಾ ಏರ್ಪಾಡಿನ ಪರಿಶೀಲನೆ ಸಭೆ ನಡೆಸುವ ಹೆಸರಿನಲ್ಲಿ ಪಕ್ಷದ ಪ್ರಚಾರ ಕಾರ್ಯ ನಡೆಸಿದ್ದರು ಆರೋಪಿಸಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಚಿದಂಬರಂಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ. |