ಮುಂದಿನ ಲೋಕಸಭಾ ಚುನಾವಣೆಯ ಲಕ್ನೋ ಕ್ಷೇತ್ರದ ಸಮಾಜವಾದಿ ಅಭ್ಯರ್ಥಿಯಾಗಿ ನಫೀಸಾ ಅಲಿ ಅವರನ್ನು ಕಣಕ್ಕಿಳಿಸುವುದಾಗಿ ಭಾನುವಾರ ಅಧಿಕೃತವಾಗಿ ಘೋಷಿಸಿದೆ.ಮುಂಬೈ ಸರಣಿ ಸ್ಫೋಟದ ಪ್ರಕರಣದಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪ ಎದುರಿಸುತ್ತಿರುವ ನಟ, ಸಂಜಯ್ ದತ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸರ್ವೋಚ್ಚನ್ಯಾಯಾಲಯ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಲಕ್ನೋ ಕ್ಷೇತ್ರದಿಂದ ಅಖಾಡಕ್ಕಿಳಿಯುವ ಸಂಜು ಬಾಬಾನ ಕನಸಿಗೆ ತಣ್ಣೀರೆಚಿದಂತಾಗಿತ್ತು. ಆ ನಿಟ್ಟಿನಲ್ಲಿ ಸಮಾಜವಾದಿ ಪಕ್ಷ ಲಕ್ನೋ ಕ್ಷೇತ್ರದಿಂದ ನಫೀಸಾ ಅವರನ್ನು ಅಖಾಡಕ್ಕೆ ಇಳಿಸುವುದಾಗಿ ತಿಳಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸಫೀಸಾ ಕೋಲ್ಕತಾ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.ಭಾನುವಾರ ಸಮಾಜವಾದಿ ಪಕ್ಷದ ಅಮರ್ ಸಿಂಗ್, ನಟ ಸಂಜಯ್ ದತ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ವಿಷಯ ತಿಳಿಸಿದರು. ಅಲ್ಲದೇ ನಫೀಸಾ ಅವರ ಚುನಾವಣಾ ಪ್ರಚಾರದಲ್ಲಿ ದತ್ ಸ್ಟಾರ್ ಪ್ರಚಾರಕ ಎಂದು ಹೇಳಿದರು. |