ಅಸ್ಸಾಂನ ಲಖೀಂಪುರ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ದುರಂತದಲ್ಲಿ ಕಳ್ಳಭಟ್ಟಿ ಸೇವಿಸಿ ಹದಿನಾಲ್ಕು ಮಂದಿ ಮೃತಪಟ್ಟಿದ್ದು, ಇಪ್ಪತ್ತೇಳು ಮಂದಿ ತೀವ್ರ ಅಸ್ವಸ್ಥಗೊಂಡಿದ್ದಾರೆಂದು ಸಂಬಂಧಿತ ಮೂಲಗಳು ತಿಳಿಸಿವೆ. ಕಳ್ಳಭಟ್ಟಿ ತಯಾರಿಕೆ ಹಾಗೂ ಮಾರಾಟದ ಹಿಂದೆ ಕಾರ್ಯಾಚರಿಸಿದ ತಂಡದ ಪತ್ತೆ ಹಚ್ಚಲು ಪೊಲೀಸರು ತೀವ್ರ ಶೋಧ ಆರಂಭಿಸಿದ್ದಾರೆ. |