ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಹಾಗೂ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಹುಟ್ಟುಹಬ್ಬಕ್ಕೆ ಪಕ್ಷದ ಕಾರ್ಯಕರ್ತರು ಹಣ ಸಂಗ್ರಹಿಸಿರುವುದನ್ನು ಟೀಕಿಸಿರುವ ಸಮಾಜವಾದಿ ಪಕ್ಷ ಕೂಡಲೇ ಈ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮಾತನಾಡಿ, ಕಳೆದ ವರ್ಷ ಮಾಯಾವತಿ ಅವರ ಹುಟ್ಟುಹಬ್ಬಕ್ಕೆ 12 ಕೋಟಿ ರೂಪಾಯಿ ಹಣ ಸಂಗ್ರಹಿಸಲಾಗಿತ್ತು. ಈ ವರ್ಷ ಅದು ದ್ವಿಗುಣಗೊಂಡಿದೆ ಎಂದು ಸ್ವತಃ ಮಾಯಾವತಿ ಅವರೇ ಹೇಳಿಕೊಂಡಿದ್ದಾರೆ. ಈ ಬಗ್ಗೆ ತಕ್ಷಣ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. |