ಅಮೇಥಿ: ಕಾಂಗ್ರೆಸ್ನ ಸ್ಟಾರ್ ಪ್ರಚಾರಕಿ ಎಂದೇ ಖ್ಯಾತರಾದ ಪ್ರಿಯಾಂಕಾ ಗಾಂಧಿ ತಮ್ಮ ತಾಯಿ ಸೋನಿಯಾ ಗಾಂಧಿ ಹಾಗೂ ಸೋದರ ರಾಹುಲ್ ಗಾಂಧಿ ಪರವಾಗಿ ರಾಯ್ಬರೇಲಿ ಹಾಗೂ ಅಮೇಥಿಯಲ್ಲಿ ಶನಿವಾರದಿಂದ ಪ್ರಚಾರ ಆರಂಭಿಸಲಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಪ್ರಿಯಾಂಕಾ ಹಳ್ಳಿ ಹಳ್ಳಿಗೆ ಹೋಗಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. |