ಬಂಗಾಳಕೊಲ್ಲಿಯಲ್ಲಿ ಕೇಂದ್ರಿಕೃತವಾಗಿರುವ 'ಬಿಜಲಿ' ಚಂಡಮಾರುತವು ಇನ್ನಷ್ಟು ಪ್ರಬಲವಾಗಿ ಈಶಾನ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದ್ದುದರಿಂದ ಬಂಗಾಳ ಕೊಲ್ಲಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಪ್ರತಿ ಗಂಟೆಗೆ 60ರಿಂದ 80 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಈ ಚಂಡಮಾರುತ ಮುಂದಿನ 48 ಗಂಟೆಗಳ ಅವಧಿಯಲ್ಲಿ ಒರಿಸ್ಸಾ ಕರಾವಳಿ ಪ್ರದೇಶ ಹಾದು ಹೋಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. |