ಅಮೆರಿಕದ ವಿದ್ಯಾರ್ಥಿನಿಯೊಬ್ಬಾಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕಾಲೇಜುಗಳ ಮತ್ತಿಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಈಶಾನ್ಯ ಮುಂಬೈನ ಟ್ರಾಂಬೆಯಲ್ಲಿರುವ ಟಿಐಎಸ್ಎಸ್‌ನ ವಿದ್ಯಾರ್ಥಿನಿಯ ಮೇಲೆ ಈ ದುಷ್ಕೃತ್ಯ ಎಸಗಲಾಗಿದೆ. ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ತಲೆ ತಪ್ಪಿಸಿಕೊಂಡಿರುವ ಇನ್ನೊಬ್ಬನಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |