ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ. ದಿಗ್ವಿಜಯ್ ಸಿಂಗ್ ಅವರು ಉತ್ತರಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ತೆರಳಿದ್ದ ವೇಳೆ ಹೆಲಿಕಾಪ್ಟರನ್ನು ಹೆಲಿಪ್ಯಾಡ್‌ನಲ್ಲಿ ಇಳಿಸುವ ಬದಲು ಚುನಾವಣಾ ಸಭೆ ನಡೆಯಬೇಕಾದ ಪ್ರದೇಶದಲ್ಲಿ ಇಳಿಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. |