ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆಂಬ ಆರೋಪದ ಪ್ರಕರಣದಲ್ಲಿ ವಿಶ್ವಸಂಸ್ಥೆಯ ಮಾಜಿ ರಾಜತಾಂತ್ರಿಕ ಹಾಗೂ ರಾಜಕಾರಣಿ ಶಶಿ ತರೂರ್ ಅವರಿಗೆ ಇಲ್ಲಿನ ನ್ಯಾಯಾಲಯವೊಂದು ಶನಿವಾರ ಜಾಮೀನು ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 9ಕ್ಕೆ ಮುಂದೂಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧೆಗಿಳಿದಿರುವ ತರೂರ್ ನ್ಯಾಯಾಲಯದಲ್ಲಿ ಹಾಜರಾಗಿದ್ದರು. |