ಲೋಕಸಭಾ ಚುನಾವಣೆ ನಂತರ ಯುಪಿಎಯಲ್ಲಿ ಇರುವ ಅಂಗ ಪಕ್ಷಗಳನ್ನು ಹೊರತುಪಡಿಸಿ ಇತರ ಯಾವುದೇ ಪಕ್ಷಗಳು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಲು ಬಯಸಿದರೆ ಬಾಗಿಲು ತೆರೆದಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ ಅವರು ಖಾಸಗಿ ಟಿ.ವಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದ ವೇಳೆ ತಿಳಿಸಿದ್ದಾರೆ. ಆದರೆ ಇವೆಲ್ಲವು ಚುನಾವಣಾ ಫಲಿತಾಂಶದ ಮೇಲೆ ಅವಲಂಬಿತವಾಗಿದೆ ಎಂದು ಅವರು ಹೇಳಿದ್ದಾರೆ. |