ಬಿಜೆಪಿಯೊಂದಿಗೆ ಸಂಬಂಧ ಕಡಿದುಕೊಂಡ ಹಾಗೂ ಪ್ರಸ್ತುತ ಒರಿಸ್ಸಾದಲ್ಲಿ ಅಧಿಕಾರದಲ್ಲಿರುವ ಬಿಜು ಜನತಾ ದಳ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ 99 ಸ್ಥಾನಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದೆ.ಒರಿಸ್ಸಾದ 147 ವಿಧಾನಸಭಾ ಕ್ಷೇತ್ರಗಳ ಪೈಕಿ 99 ಕ್ಷೇತ್ರಗಳಲ್ಲಿ ವಿಜಯಲಕ್ಷ್ಮಿಯನ್ನು ಒಲಿಸಿಕೊಂಡು ಮತ್ತೆ ಅಧಿಕಾರ ಹಿಡಿಯುವತ್ತ ಲಗ್ಗೆಯಿಟ್ಟಿದೆ.29 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿದರೆ, ಬಿಜೆಡಿಯ ಮಾಜಿ ಮಿತ್ರ ಬಿಜೆಪಿ ಕೇವಲ 10 ಕ್ಷೇತ್ರಗಳಿಗೆ ತೃಪ್ತಿಪಡಬೇಕಾಗಿದೆ. ಈ ಹಿಂದಿನ ಘಟನೆಯಿಂದಾಗಿ ಬಿಜೆಪಿಗೆ ಇದರಿಂದ ತೀವ್ರ ಮುಖಭಂಗ ಅನುಭವಿಸಿದಂತಾಗಿದೆ.ಮುಖ್ಯಮಂತ್ರಿ ಹಾಗೂ ಬಿಜೆಡಿಯ ಮುಖಂಡ ನವೀನ್ ಪಟ್ನಾಯಿಕ್ ತಮ್ಮ ಹಿಂಜಿಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘಬ್ ಪರಿದಾ ಅವರನ್ನು ಸೋಲಿಸಿದ್ದಾರೆ. |