ಎಲ್‌ಟಿಟಿಇ ಉಗ್ರರು ಸಮುದ್ರ ಮಾರ್ಗವಾಗಿ ಭಾರತಕ್ಕೆ ನುಸುಳಿ ಬುರುವುದನ್ನು ತಡೆಯಲು ತೀರ ಪ್ರದೇಶದಲ್ಲಿ ತೀವ್ರನಿಗಾವಿರಿಸಲಾಗಿದೆ. ಕೇರಳ, ಕರ್ನಾಟಕ ಸೇರಿದಂತೆ ತಮಿಳುನಾಡಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೇ ವೇಳೆ ಎಲ್‌ಟಿಟಿಇ ನಾಯಕ ಪ್ರಭಾಕರನ್ ಹತನಾದ ಹಿನ್ನಲೆಯಲ್ಲಿ ತಮಿಳುನಾಡಿನ ಹಲವೆಡೆ ಹಿಂಸಾಚಾರ ಭುಗಿಲೆದ್ದಿದೆ. |