ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆ ಪ್ರದೇಶದಲ್ಲಿ ಸೇನೆ ಹಾಗೂ ಉಗ್ರರ ನಡುವೆ ಏರ್ಪಟ್ಟ ಗುಂಡಿನ ಕಾಳಗದಲ್ಲಿ ಕನಿಷ್ಠ 6 ಉಗ್ರರು ಹತರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ಯೆಗೀಡಾದವರು ನ್ಯಾಶನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋಲೆಂಡ್(ಎನ್‌ಡಿಎಫ್‌ಬಿ) ಉಗ್ರ ಸಂಘಟನೆಯ ಕಾರ್ಯಕರ್ತರಾಗಿದ್ದಾರೆ. |