ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಶಿಬು ಸೊರೇನ್ ಅವರ ಪುತ್ರ ದುರ್ಗಾ ಸೊರೇನ್ ಅವರು ಗುರುವಾರ ಮುಂಜಾನೆ ಸಾವನ್ನಪ್ಪಿದ್ದಾರೆ.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ದುರ್ಗಾ ಅವರಿಗೆ 39 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ ಮೂವರು ಮಗಳಂದಿರನ್ನು ಅಗಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಅಸ್ವಸ್ಥರಾಗಿದ್ದ ದುರ್ಗಾರನ್ನು ಬೊಕಾರಾ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಆಸ್ಪತ್ರೆಗೆ ತಲುಪುವಾಗಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಆಸ್ಪತ್ರೆಯ ನಿರ್ದೇಶಕ ಎ.ಕೆ. ಸಿಂಗ್ ತಿಳಿಸಿದ್ದಾರೆ.
ಮಾಜಿ ಶಾಸಕರಾಗಿದ್ದ ದುರ್ಗಾ ಅವರು ಗೊಡ್ಡಾ ಲೋಕಸಭಾ ಸ್ಥಾನದಿಂದ ಲೋಕಸಭಾ ಚುನಾವಣೆಗೆ ಸ್ಫರ್ಧಿಸಿದ್ದರು. ಅವರು ಜೆಎಂಎಂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. |