ರಾಷ್ಟ್ರದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ಅವರ 45ನೆ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಬುಧವಾರದಂದು ರಾಷ್ಟ್ರಾದ್ಯಂತ ಅಗಲಿದ ನಾಯಕನಿಗೆ ಗೌರವ ನಮನ ಸಲ್ಲಿಸಲಾಗುತ್ತಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಪ್ರಧಾನಿ ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ದೆಹಲಿ ಮುಖ್ಯಮಂತ್ರಿ ಶೀಲಾದೀಕ್ಷಿತ್ ಸೇರಿದಂತೆ ಅನೇಕ ನಾಯಕರು ಶಾಂತಿವನಕ್ಕೆ ತೆರಳಿ ಪುಷ್ಪಾಂಜಲಿ ಸಲ್ಲಿಸಿದರು.ರಕ್ಷಣಾ ಸಚಿವ ಎ.ಕೆ. ಆಂಟನಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ. ಕೃಷ್ಣ, ಮಾಜಿ ಗೃಹಸಚಿವ ಶಿವರಾಜ್ ಪಾಟೀಲ್ ಅವರುಗಳು ನೆಹರೂ ಸ್ಮಾರಕ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದರು.ನೆಹರೂ ಸಮಾಧಿ ಸ್ಥಳದಲ್ಲಿ ಸರ್ವಧರ್ಮಗಳ ಪ್ರಾರ್ಥನೆಯನ್ನು ಆಯೋಜಿಸಲಾಗಿತ್ತು. ಪ್ರಾರ್ಥನಾ ಸಭೆಯ ಬಳಿಕ ನೆಹರೂ ಅವರು ಮಾಡಿದ್ದ ಭಾಷಣ ಒಂದನ್ನು ಪ್ರಸಾರ ಮಾಡಲಾಯಿತು.ನೆಹರೂ ಅವರು 1889ರ ನವೆಂಬರ್ 14ರಂದು ಜನಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿದ್ದ ಅವರು ದೇಶವು ಸ್ವಾತಂತ್ರ್ಯ ಪಡೆದ ಬಳಿಕ ಪ್ರಥಮ ಪ್ರಧಾನಿಯಾಗಿದ್ದರು. 1967ರ ಮೇ 27ರಂದು ನೆಹರೂ ಸಾವನ್ನಪ್ಪಿದ್ದರು. |