ಅನುದಾನ ರಹಿತ ಖಾಸಗೀ ಕಾಲೇಜುಗಳಲ್ಲಿ ಇತರ ಹಿಂದುಳಿದ ಜಾತಿ(ಒಬಿಸಿ)ಗಳಿಗೆ ಮೀಸಲಾತಿ ನೀಡುವ ಕುರಿತು ಸರ್ಕಾರವು ಚಿಂತನೆ ನಡೆಸಲಿದೆ ಎಂಬುದಾಗಿ ಮಾನವ ಸಂಪನ್ಮೂಲ ಖಾತೆ ಸಚಿವ ಕಪಿಲ್ ಸಿಬಾಲ್ ಹೇಳಿದ್ದಾರೆ.ಅನುದಾನ ರಹಿತ ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಬಾಲ್ ಈ ಕುರಿತು ಚಿಂತಿಸಲಿದ್ದೇವೆ ಎಂದು ನುಡಿದರು.ಕೇಂದ್ರೀಯ ಶೈಕ್ಷಣಿಕ ಸಂಸ್ಥೆಗಳಲ್ಲಿ ಇತರ ಹಿಂದುಳಿದ ಜಾತಿಗಳಿಗೆ ಶೇ.27ರಷ್ಟು ಮೀಸಲಾತಿಯನ್ನು ಸರ್ಕಾರವು ಜಾರಿಗೆ ತಂದಿದೆ. ಆದರೆ ಹೆಚ್ಚಿನ ಸಂಸ್ಥೆಗಳು ಈ ನೀತಿಯನ್ನು ಸೂಕ್ತವಾಗಿ ಜಾರಿಗೆ ತಂದಿಲ್ಲ ಎಂದು ಅವರು ನುಡಿದರು.ಒಬಿಸಿ ಕೋಟ ಜಾರಿಗೆ ತರಲು ಅನುಕೂಲವಾಗುವಂತೆ ಸೀಟುಗಳನ್ನು ಹೆಚ್ಚಿಸಲು ಮೂಲಸೌಕರ್ಯಗಳ ವಿಸ್ತರಣೆಗಾಗಿ ಸರ್ಕಾರವು ಹೆಚ್ಚುವರಿ ಹಣಕಾಸು ನಿಧಿಯನ್ನು ಮಂಜೂರು ಮಾಡಿದೆ ಎಂದು ಅವರು ತಿಳಿಸಿದರು. |