ಲೋಕಸಭಾ ಸಂಸದರಾಗಿ ಆಯ್ಕೆಯಾದ ರಾಹುಲ್ ಗಾಂಧಿ, ಮುಲಾಯಂ ಸಿಂಗ್ ಯಾದ್, ಕಲ್ಯಾಣ್ ಸಿಂಗ್, ವರುಣ್ ಗಾಂಧಿ ಸೇರಿದಂತೆ ಹಲವು ಗಣ್ಯರು ಮಂಗಳವಾರದಂದು ಪ್ರಮಾಣ ವಚನ ಸ್ವೀಕರಿಸಿದರು. ರಾಹುಲ್ ಗಾಂಧಿ ಆಂಗ್ಲ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ವರುಣ್ ಗಾಂಧಿ ಹಿಂದಿಯಲ್ಲಿ ಸತ್ಯಪ್ರತಿಜ್ಞೆಗೈದರು. ಅಲ್ಲದೆ ತಮಿಳುನಾಡಿನ ಎಲ್ಲಾ ಸಂಸದರು ತಮಿಳಿನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರು.
|