ಮಹಿಳಾ ಮೀಸಲಾತಿ ಮಸೂದೆಯು ಅದರ ಪ್ರಸಕ್ತ ಸ್ವರೂಪದಲ್ಲೇ ಅಂಗೀಕಾರವಾದರೆ ತಾನು ವಿಷಸೇವಿಸಿ ಅತ್ಮಹತ್ಯೆ ಮಾಡಿಕೊಳ್ಳುವುದಾಗಿ ಶರದ್ ಯಾದವ್ ಬೆದರಿಕೆ ಹಾಕಿದ್ದಾರೆ.
"ನಮ್ಮ ಬಳಿ ಸಂಖ್ಯಾ ಶಕ್ತಿ ಇಲ್ಲದಿರಬಹುದು. ಆದರೆ ನಾನು ಇಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಆದರೆ, ಮಹಿಳಾ ಮೀಸಲಾತಿ ಬಿಲ್ ಪಾಸ್ ಮಾಡಲು ಮಾತ್ರ ಅವಕಾಶ ನೀಡುವುದಿಲ್ಲ" ಎಂದು ಅವರು ಹೇಳಿದ್ದಾರೆ.
ಲೋಕಸಭೆಯಲ್ಲಿ ರಾಷ್ಟ್ರಪತಿಗಳಿಗೆ ವಂದನಾ ನಿರ್ಣಯದ ಮೇಲೆ ನಡೆಯುತ್ತಿರುವ ಚರ್ಚೆಯಲ್ಲಿ ಪಾಲ್ಗೊಂಡ ಅವರು, ಕಾಂಗ್ರೆಸ್ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಕಣ್ಣೊರಿಸುವ ತಂತ್ರ ಮಾಡುತ್ತಿದೆ ಎಂದು ಅವರು ದೂರಿದರು.
"ರಾಷ್ಟ್ರಪತಿ ಹಾಗೂ ಸ್ಪೀಕರ್ ಸ್ಥಾನಕ್ಕೆ ಮಹಿಳೆಯರನ್ನು ನೇಮಿಸುವ ಮೂಲಕ ಕಾಂಗ್ರೆಸ್ ನಾಟಕ ಮಾಡುತ್ತಿದೆ" ಎಂದ ಯಾದವ್, ಹಿಂದುಳಿದ ವರ್ಗಗಳು ಮತ್ತು ಅತಿ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮುಕ್ತಿ ನೀಡಬೇಕಿರುವುದು ನೈಜ ಅವಶ್ಯಕತೆಯಾಗಿದೆ ಎಂದು ಯಾದವ್ ಹೇಳಿದರು. |