ಭಾರತೀಯ ಜನತಾ ಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ಅರುಣ್ ಜೇಟ್ಲಿ ರಾಜೀನಾಮೆ ನೀಡಿದ್ದಾರೆ. ಜೇಟ್ಲಿ ಅವರು ಲಂಡನ್‌ಗೆ ತೆರಳುವ ಮುನ್ನ ಪಕ್ಷಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಜೇಟ್ಲಿ, ಒಬ್ಬವ್ಯಕ್ತಿಗೆ ಒಂದೇ ಹುದ್ದೆ ಎಂಬ ಪಕ್ಷದ ತತ್ವಕ್ಕೆ ಅನುಗುಣವಾಗಿ ತಾನುತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ರಾಜ್‌ನಾಥ್ ಸಿಂಗ್ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.ಮೇಲ್ನೋಟಕ್ಕೆ ಇದೊಂದು ತಾಂತ್ರಿಕ ರಾಜೀನಾಮೆ ಎಂಬಂತೆ ತೋರಿಬಂದರೂ, ನವದೆಹಲಿಯಲ್ಲಿ ಜೂನ್ 20ರಿಂದ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಿಂದ ತಪ್ಪಿಸಿಕೊಳ್ಳಲು ಬಯಸಿದ್ದಾರೆ ಎಂದು ಹೇಳಲಾಗಿದೆ. |