ಇತ್ತೀಚಿನ ಮಹಾ ಚುನಾವಣೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿರುವ ಬಿಜೆಪಿ ಸಂಸದ ವರುಣ್ ಗಾಂಧಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಜಿಲ್ಲಾ ಪೊಲೀಸರು ಉತ್ತರ ಪ್ರದೇಶ ಸರ್ಕಾರದ ಅನುಮತಿ ಕೋರಿದ್ದಾರೆ.ನ್ಯಾಯಾಲಯಕ್ಕೆ ಸಲ್ಲಿಸಲು ಆರೋಪಪಟ್ಟಿ ಸಿದ್ಧವಾಗಿದೆ. ಆರೋಪಪಟ್ಟಿ ಸಲ್ಲಿಕೆಗೆ ಅನುಮತಿಗಾಗಿ ಸರ್ಕಾರಕ್ಕಾಗಿ ಪತ್ರಬರೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ತಿಳಿಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯವು ವರುಣ್ ಸಿಡಿ ತಿರುಚಲಾಗಿಲ್ಲ ಎಂಬುದಾಗಿ ಹೇಳಿರುವುದು ತನಿಖೆಯನ್ನು ಪೂರ್ಣಗೊಳಿಸಲು ಅನುಕೂಲವಾಗಿದೆ ಎಂದು ಅವರು ಹೇಳಿದ್ದಾರೆ.ಚುನಾವಣಾ ಸಂದರ್ಭದಲ್ಲಿ ತನ್ನ ಕ್ಷೇತ್ರದಲ್ಲಿ ಪ್ರಚಾರ ಭಾಷಣ ಮಾಡುವ ವೇಳೆಗೆ ವರುಣ್ ಮುಸ್ಲಿಮರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆಪಾದಿಸಲಾಗಿತ್ತು ಮತ್ತು ಈ ಹಿನ್ನೆಲೆಯಲ್ಲಿ ಅವರು ಬಂಧನಕ್ಕೀಡಾಗಿದ್ದರು. ಪ್ರಸ್ತುತ ವರುಣ್ ಜಾಮೀನು ಮೇಲೆ ಹೊರಗಿದ್ದಾರೆ. |