ಮಾವೋವಾದಿಗಳ ಮೇಲೆ ನಿಷೇಧ ಹೇರಿರುವುದನ್ನು ವಿರೋಧಿಸಿ, ಈ ಸಮಸ್ಯೆಯನ್ನು ರಾಜಕೀಯವಾಗಿ ಮತ್ತು ಆಡಳಿತಾತ್ಮಕವಾಗಿ ಪರಿಹರಿಸಿಕೊಳ್ಳಬಹುದು ಎಂಬುದಾಗಿ ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಹೇಳಿದ್ದರೂ, ವಿಶ್ವಹಿಂದೂ ಪರಿಷತ್‌ಗೆ ಸಂಬಂಧಿಸಿದಂತೆ ಇಂತಹ ಪರಿಹಾರ ಅಸಾಧ್ಯ ಎಂಬುದು ಅವರ ಅಭಿಪ್ರಾಯವಾಗಿದೆ.ಎಡಪಂಥೀಯ ಉಗ್ರವಾದವನ್ನು ರಾಜಕೀಯವಾಗಿ ಪರಿಹರಿಸಿಕೊಳ್ಳಬಹುದು ಎಂಬುದಾಗಿ ಹೇಳಿರುವ ಕಾರಟ್, ಈ ಹಿಂದೆ ಹಲವಾರು ಬಾರಿ ಬಲಪಂಥೀಯ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳವನ್ನು ನಿಷೇಧಿಸಬೇಕು ಎಂಬುದಾಗಿ ಒತ್ತಾಯಿಸಿರುವುದನ್ನು ಮರೆತಂತೆ ಕಾಣುತ್ತದೆ.ಮಾವೋವಾದಿ ಸಂಘಟನೆಯನ್ನು ನಿಷೇಧಿಸಿ ಅದನ್ನು ಭಯೋತ್ಪಾದನಾ ಸಂಘಟನೆಗಳ ಪಟ್ಟಿಗೆ ಸೇರಿಸಿ ಕೇಂದ್ರವು ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಇದಕ್ಕೆ ಪ್ರತಿಕ್ರಿಯಿಸಿರುವ ಕಾರಟ್ "ಇಂತಹ ಸಂಘಟನೆಗಳನ್ನು ನಿಷೇಧಿಸುವುದು ಯಾವುದೇ ಉದ್ದೇಶವನ್ನು ಪೂರೈಸುವುದಿಲ್ಲ, ಅವುಗಳು ತಮ್ಮ ಹೆಸರು ಬದಲಿಸಿ ಕಾರ್ಯಾಚರಣೆಯನ್ನು ಮುಂದುವರಿಸುತ್ತವೆ" ಎಂದು ಹೇಳಿದ್ದರು. |