ಕರಾವಳಿಯಲ್ಲಿ ಭದ್ರತೆಯನ್ನು ಬಲಗೊಳಿಸುವ ತನ್ನ ಅಭಿಯಾನದಂಗವಾಗಿ ಸರ್ಕಾರವು ಮುಂಬರುವ ಮಾರ್ಚ್ ತಿಂಗಳೊಳಗಾಗಿ ಒಂಬತ್ತು ರಾಜ್ಯಗಳು ಹಾಗೂ ನಾಲ್ಕು ಕೇಂದ್ರಾಡಳಿತ ಪ್ರದೇಶಗಳ 3,331 ಹಳ್ಳಿಗಳ 'ಸಾಮಾನ್ಯ ನಿವಾಸಿ'ಗಳಿಗೆ ಗುರುತಿನ ಚೀಟಿ ನೀಡುವುದಾಗಿ ಗೃಹ ಸಚಿವ ಪಿ.ಚಿದಂಬರಂ ಅವರು ರಾಜ್ಯ ಸಭೆಗೆ ಬುಧವಾರ ತಿಳಿಸಿದ್ದಾರೆ.
ಶೂನ್ಯವೇಳೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಅವರು ಕಳೆದ ನವೆಂಬರ್ ತಿಂಗಳಲ್ಲಿ ಉಗ್ರರು ನಡೆಸಿರುವ ದಾಳಿಯ ಹಿನ್ನೆಲೆಯಲ್ಲಿ ಇಂತಹ ನಿವಾಸಿಗಳಿಗೆ ಸ್ಮಾರ್ಟ್ ಕಾರ್ಡ್ ಆಧಾರಿತ ಗುರುತಿನ ಚೀಟಿ ನೀಡಿರುವ ಪ್ರಸ್ತಾಪ ಬಂದಿದೆ ಎಂದು ತಿಳಿಸಿದರು.
ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳ್ನಾಡು, ಆಂಧ್ರ ಪ್ರದೇಶ, ಒರಿಸ್ಸಾ, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಡಾಮನ್ ಮತ್ತು ಡಿಯು, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ಹಾಗೂ ಪುದುಚೇರಿಗಳಲ್ಲಿ ಈ ಗುರುತಿನ ಚೀಟಿಗಳನ್ನು ವಿತರಿಸಲಾಗುವುದು.
ಈ ಕಾರ್ಯವನ್ನು ಎರಡು ಹಂತಗಳಲ್ಲಿ ಪೂರ್ಣಗೊಳಿಸುವುದಾಗಿ ಸಚಿವರು ನುಡಿದರು. |