ಐದರ ಹರೆಯದ ಬಾಲೆಯೊಬ್ಬಳ ಮೇಲೆ ಅಪರಿಚಿತ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ, ಆಘಾತಕಾರಿ ಘಟನೆಯು ನಗರದ ಹೊರವಲಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಈಗತ್ತೂರು ಗ್ರಾಮದಲ್ಲಿ ಈ ದುರ್ಘಟನೆಯು ಭಾನುವಾರ ನಸುಕಿಗೂ ಮುಂಚಿನ ಅವಧಿಯಲ್ಲಿ ಸಂಭವಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಳಿಕ ಆಂಧ್ರ ಪ್ರದೇಶದವರಾಗಿರುವಬಾಲಕಿಯ ತಂದೆ ಮೋಹನ್ ರಾವ್ ಅವರು ಬಾಲಕಿಯನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದರಾದರೂ, ಬಾಲಕಿಯು ಮೈನರ್ ಹಾಗೂ ಇದೊಂದು ಪೊಲೀಸ್ ಪ್ರಕರಣವಾಗಿರುವ ಕಾರಣ ಆಕೆಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದರು. ಬಳಿಕ ಆಕೆಯನ್ನು ಸರ್ಕಾರಿ ಮಕ್ಕಳ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಪ್ರಕರಣವನ್ನು ಕೇಳಂಬಾಕಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಗತ್ತೂರಿನಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳು ಹೆಚ್ಚು ನಡೆಯುತ್ತಿದ್ದು, ಇಲ್ಲಿ ಹೆಚ್ಚಿನ ಸಂಖ್ಯೆಯ ಆಂಧ್ರದ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. "ನಾವು ಮಗುವಿನ ಹತ್ತಿರದ ಸಂಬಂಧಿಗಳನ್ನು ತನಿಖೆ ನಡೆಸುತ್ತಿದ್ದೇವೆ. ಇಲ್ಲಿ ಆಂಧ್ರ ಕಾರ್ಮಿಕರ ಸಂಖ್ಯೆಯು ಸುಮಾರು ಮೂರು ಸಾವಿರಕ್ಕಿಂತ ಹೆಚ್ಚಿದೆ" ಎಂಬುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |