ಪಕ್ಷದ ನಾಯಕರಾದ ಎಲ್.ಕೆ.ಆಡ್ವಾಣಿ ಹಾಗೂ ನರೇಂದ್ರ ಮೋದಿ ಅವರಿಗೆ ನಕ್ಸಲ್ ಬೆದರಿಕೆ ಇರುವುದರಿಂದ ಅವರಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಬಿಜೆಪಿ ಒತ್ತಾಯಿಸಿದೆ.ಈ ಕುರಿತು ಹೇಳಿಕೆ ನೀಡಿರುವ ಬಿಜೆಪಿ ವಕ್ತಾರ ರಾಜೀವ್ ಪ್ರತಾಪ್ ರೂಡಿ, ಆಂಧ್ರಪ್ರದೇಶ ಸರ್ಕಾರಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಅಡ್ವಾಣಿ ಹಾಗೂ ಮೋದಿ ನಕ್ಸಲ್ ದಾಳಿಗೊಳಗಾಗುವ ಸಾಧ್ಯತೆ ಇದೆ.ಈ ಹಿನ್ನೆಲೆಯಲ್ಲಿ ಇಬ್ಬರೂ ರಾಷ್ಟ್ರೀಯ ನಾಯಕರಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ರೂಡಿ ಒತ್ತಾಯಿಸಿದ್ದಾರೆ. ಆದರೆ ನಕ್ಸಲ್ ಭೀತಿ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಆಡ್ವಾಣಿ ಕಚೇರಿಯ ಅಧಿಕಾರಿಗಳು ಹೇಳಿದ್ದಾರೆ. |