ನವದೆಹಲಿ: ಕಳೆದ ಮಹಾಚುನಾವಣೆಯಲ್ಲಿ ಪಕ್ಷವು ಹಿನ್ನೆಡೆ ಕಂಡಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕ ಎಲ್.ಕೆ. ಆಡ್ವಾಣಿ ರಾಷ್ಟ್ರಾದ್ಯಂತ ಇನ್ನೊಂದು ಯಾತ್ರೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ. ಆದರೆ ಈ ಯಾತ್ರೆಯಲ್ಲಿ ಸಾರ್ವಜನಿಕ ಭಾಷಣಗಳಿರುವುದಿಲ್ಲ, ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರನ್ನು ಭೇಟಿಯಾಗಿ ಚುನಾವಣಾ ಸೋಲು ಅಸಹಜವಲ್ಲ ಎಂಬುದಾಗಿ ಅವರಿಗೆ ಮನವರಿಕೆ ಮಾಡಿಕೊಡಲು ದೇಶಾದ್ಯಂತ ಪ್ರವಾಸ ಮಾಡಲು ಇಚ್ಚಿಸಿರುವುದಾಗಿ ಅವರು ತಿಳಿಸಿದ್ದಾರೆ. |