ಮಣಿಪುರದ ಇಂಫಾಲದ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಹೇರಿದ್ದ ಅನಿರ್ದಿಷ್ಟಾವಧಿ ಕರ್ಫ್ಯೂವನ್ನು ಗುರುವಾರ 12ಗಂಟೆಗಳ ಕಾಲ ಸಡಿಲಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಿನಬಳಕೆಯ ವಸ್ತುಗಳನ್ನು ಕೊಳ್ಳಲು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕರ್ಫ್ಯೂವನ್ನು 12ಗಂಟೆಗಳ ಕಾಲ ಮುಂಜಾನೆ 5ರಿಂದ ಸಡಿಲಿಸಲಾಗಿದೆ. ಆದರೂ ಮುನ್ನೆಚ್ಚರಿಕೆಯ ಅಂಗವಾಗಿ ಪೊಲೀಸ್ ಮತ್ತು ಭದ್ರತಾ ಪಡೆಗಳು ಗಸ್ತು ತಿರುಗುತ್ತಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ.
ಪೊಲೀಸ್ ಕಮಾಂಡರ್‌ಗಳು ಯುವಕನೊಬ್ಬನನ್ನು ನಕಲಿ ಎನ್‌ಕೌಂಟರ್ ಮೂಲಕ ಯುವಕನೊಬ್ಬನನ್ನು ಹತ್ಯೆಗೈದಿರುವುದಾಗಿ ಆರೋಪಿಸಿರುವ ಜನರು ಪ್ರತಿಭಟನೆಗೆ ಇಳಿದಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ಕರ್ಫ್ಯೂ ಜಾರಿಗೊಳಿಸಲಾಗಿತ್ತು.
ಆ ನಿಟ್ಟಿನಲ್ಲಿ ಇಂಫಾಲ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದಾಗಿ ತಿಳಿಸಿದ್ದಾರೆ. ಇದೀಗ ಪರಿಸ್ಥಿತಿ ಹತೋಟಿಯಲ್ಲಿದ್ದು ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.