ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಭ್ರಷ್ಟಾಚಾರ ಸಹಿಸುವುದಿಲ್ಲ; ರಾಷ್ಟ್ರಪತಿ ಪಾಟೀಲ್ (Terrorism | Pratibha Patil | Independence Day | UPA | Manmohan singh)
 
PTI
ಸರ್ಕಾರದ ಮಹತ್ವಾಕಾಂಕ್ಷೆಯ ಜನಪರ ಕಾರ್ಯಕ್ರಮಗಳಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಎಚ್ಚರಿಸಿರುವ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆಡಳಿತದಲ್ಲಿ ಸುಧಾರಣೆ ತರುವ ಮೂಲಕ ಜನರಿಗೆ ಯೋಜನೆಗಳ ಫಲ ಉಣಿಸುವಂತೆ ಕರೆ ನೀಡಿದ್ದಾರೆ.

63ನೇ ಸ್ವಾತಂತ್ರ್ಯೋತ್ಸವ ಮುನ್ನಾ ದಿನ ದೇಶವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ಸರ್ಕಾರದ ಯೋಜನೆಗಳು ಜನರನ್ನು ಸರಿಯಾಗಿ ತಲುಪಬೇಕೆಂದರೆ ಆಡಳಿತ ಯಂತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಜನರಿಗೆ ತಮ್ಮ ಹಕ್ಕುಗಳ ಬಗ್ಗೆ ಹೆಚ್ಚೆಚ್ಚು ಅರಿವಾಗುತ್ತಿದ್ದಂತೆ ಅವರ ನಿರೀಕ್ಷೆಗಳೂ ಹೆಚ್ಚಾಗುತ್ತಿವೆ. ಈ ನಿರೀಕ್ಷೆ ಈಡೇರಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಆಡಳಿತದಲ್ಲಿ ಬದಲಾವಣೆ ತರಬೇಕು ಎಂದು ಹೇಳಿದರು.

ಮಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಸಂಭವನೀಯ ಕೃಷಿ ಚಟುವಟಿಕೆ ಹಾಗೂ ನೀರಿನ ಸಮಸ್ಯೆ ಎದುರಿಸಲು ದೇಶ ಸಜ್ಜಾಗಬೇಕಿದೆ ಎಂದು ನಾಗರಿಕರಿಗೆ ಕರೆ ಕೊಟ್ಟ ಪ್ರತಿಭಾ ಪಾಟೀಲ್ ಯಾವುದೇ ಸಂದರ್ಭವನ್ನು ಎದುರಿಸಲು ಕೇಂದ್ರ ಸರ್ಕಾರ ಸಿದ್ದವಾಗಿದೆ ಎಂದು ಘೋಷಿಸಿದರು.

ಇದೇ ವೇಳೆ ರಾಷ್ಟ್ರವನ್ನು ಕಂಗೆಡಿಸಿರುವ ಹಂದಿಜ್ವರ ನಿಯಂತ್ರಣದ ನಿಟ್ಟಿನಲ್ಲಿ ಸರ್ಕಾರದ ಕ್ರಮಗಳಿಗೆ ಜನತೆ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದರು. ರೋಗ ನಿಯಂತ್ರಣದ ನಿಟ್ಟಿನಲ್ಲಿ ಸಾರ್ವಜನಿಕರು ಸ್ವಚ್ಚತೆ ಕಾಪಾಡಬೇಕು, ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಆರ್ಥಿಕ ಕುಸಿತದಂತಹ ಸಮಯದಲ್ಲೂ ದೇಶದ ಆರ್ಥಿಕ ಸ್ಥಿತಿಗತಿ ಏರುಗತಿಯಲ್ಲಿ ಸಾಗಿದೆ. ಇದೇ ದೇಶದ ಸುಭದ್ರ ಆರ್ಥಿಕ ಪರಿಸ್ಥಿತಿಯನ್ನು ಬಿಂಬಿಸಿದೆ. ಮುಂದಿನ ದಿನಗಳಲ್ಲಿಯೂ ಸರ್ಕಾರ ಮೂಲಭೂತ ಸೌಕರ್ಯ ಅಭಿವೃದ್ಧಿಯ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಜನಪರ ಕಾರ್ಯಕ್ರಮಗಳನ್ನು ಮುಂದುವರಿಸಲಿದೆ ಎಂದು ಘೋಷಿಸಿದರು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ