ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ದೇಶದಲ್ಲಿ ಯಾರೂ ಹಸಿವಿನಿಂದ ಸಾಯಬಾರ್ದು:ಪಿಎಂ (Independence day | India, Manmohan singh | H1N1 | Terrorism)
 
PTI
ದೇಶದಲ್ಲಿ ಯಾರೂ ಹಸಿವಿನಿಂದ ಸಾಯಬಾರದು. ಆ ನಿಟ್ಟಿನಲ್ಲಿ ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಯೋಜನೆ ಜಾರಿಗೆ ಚಿಂತನೆ ನಡೆಸಲಾಗುತ್ತಿದೆ. ಪ್ರತಿಯೊಬ್ಬ ನಾಗರಿಕನೂ ದೇಶದಲ್ಲಿ ಸಂತಸದಿಂದ ಇರಬೇಕೆನ್ನುವುದೇ ಸರ್ಕಾರದ ಆಶಯ, ರೈತರ ಅಭಿವೃದ್ಧಿಯಾಗದೇ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಪ್ರಧಾನಿ ಡಾ.ಮನಮೋಹನ್ ಸಿಂಗ್ 63ನೇ ಸ್ವಾತಂತ್ರ್ಯೋತ್ಸವದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡುತ್ತ ಹೇಳಿದರು.

ಆರ್ಥಿಕತೆ ಇನ್ನಷ್ಟು ವೃದ್ಧಿಗೊಳಿಸುವ ಮತ್ತಷ್ಟು ಕಾರ್ಯಕ್ರಮಗಳು, ನೀತಿ ನಿಯಮಗಳನ್ನು ಜಾರಿಗೊಳಿಸಲಾಗುವುದು. ದೇಶದಲ್ಲಿ ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ರೈತನ ಬೆನ್ನಿಗೆ ಕೇಂದ್ರ ಸರ್ಕಾರ ಇರಲಿದೆ ಎಂದು ತಿಳಿಸಿದರು.

ಸತತ ಆರನೇ ಬಾರಿಗೆ ನವದೆಹಲಿಯ ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜರೋಹಣ ನೇರವೇರಿಸಿದ ನಂತರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಜನರಿಗೆ ಹತ್ತಿರವಾಗುವಂತಹ ಕೆಲಸ ಮಾಡಲಿದೆ ಎಂದರು. ಸ್ವಾತಂತ್ರ್ಯ ದಿನಾಚರಣೆಯಂತಹ ಸಂಭ್ರಮದ ಗಳಿಗೆಯಲ್ಲಿ ದೇಶದ ಜನತೆ ಎಚ್1 ಎನ್1 ಸೋಂಕು ಜನರನ್ನು ಕೆಂಗಡಿಸಿದೆ. ಸೂಕ್ತ ತಿಳಿವಳಿಕೆ ಕೊರತೆ ಇಲ್ಲದ ಕೆಲವರು ಅನಗತ್ಯವಾಗಿ ಸಮಾಜದಲ್ಲಿ ಭೀತಿ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಯಾರು ತಲೆ ಕೆಡಿಸಿಕೊಳ್ಳಬಾರದು ಎಂದು ಮನವಿ ನೀಡಿದರು. ಅಲ್ಲದೇ ಸರಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದರು.

ದೇಶದಲ್ಲಿ ಬರ ಛಾಯೆ ಆವರಿಸಿದ ಹಿನ್ನೆಲೆಯಲ್ಲಿ ಅಗತ್ಯ ಸಾಮಗ್ರಿಗಳ ಬೆಲೆಗಳು ಗಗನಕ್ಕೇರುತ್ತಿವೆ. ಈ ಬಗ್ಗೆ ಕೇಂದ್ರ ಸರಕಾರ ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲಿದೆ. ಜೊತೆಗೆ ದೇಶದ ಬೆನ್ನೆಲುಬಾಗಿರುವ ರೈತನಿಗೆ ಈ ದಿನಗಳಲ್ಲಿ ಕಷ್ಟ ಕಾರ್ಪಣ್ಯಗಳು ಬರಲಿವೆ. ಈ ಬಗ್ಗೆ ಕೇಂದ್ರ ಸರ್ಕಾರ ಸಮಗ್ರ ಅಧ್ಯಯನ ನಡೆಸಿ, ಅನ್ನ ನೀಡುವ ರೈತನ ಹಿತ ಕಾಪಾಡಲು ಬದ್ಧವಾಗಿದೆ ಎಂದು ಸಿಂಗ್ ಭರವಸೆ ನೀಡಿದರು.

ಭಾರತದ ಆರ್ಥಿಕತೆಯನ್ನು ಈ ವರ್ಷದ ಕೊನೆಗೆ ಯಥಾಸ್ಥಿತಿಗೆ ತರುವುದು ಸರಕಾರದ ಮುಖ್ಯ ಉದ್ದೇಶವಾಗಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಕ್ಷೇತ್ರಗಳ ಮೇಲೂ ಭಾರಿ ಪರಿಣಾಮ ಬೀರಿದೆ. ಇದರಿಂದ ಅನೇಕ ವಿದ್ಯಾವಂತರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ಭಾರತ ಇಂತಹ ಆರ್ಥಿಕ ಕುಸಿತದ ನಡುವೆಯೂ ಉತ್ತಮ ಕಾರ್ಯಕ್ಷಮತೆಯಿಂದ ಆರ್ಥಿಕ ಪರಿಸ್ಥಿತಿಯನ್ನು ಕಾಯ್ದುಕೊಂಡು ಬಂದಿದೆ. ಈ ವರ್ಷ ಕೊನೆಯಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ಮನಮೋಹನ್ ಸಿಂಗ್ ಹೇಳಿದರು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ