ಕಳೆದ 40ದಿನಗಳಲ್ಲಿ ರಾಜ್ಯದಲ್ಲಿ 20 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿರುವುದಾಗಿ ಆಂಧ್ರಪ್ರದೇಶದ ಸರ್ಕಾರ ಸ್ವತಃ ಹೇಳಿಕೆ ನೀಡಿದೆ.
ರಾಜ್ಯದಲ್ಲಿ ಕಳೆದ 40ದಿನಗಳಲ್ಲಿ 20ರೈತರು ಆತ್ಯಹತ್ಯೆ ಮಾಡಿಕೊಂಡಿರುವುದಾಗಿ ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಅಲ್ಲದೆ, ಸಾವಿಗೆ ಶರಣಾಗಿರುವ ರೈತರ ಕುಟುಂಬಗಳಿಗೆ ತಲಾ 1.5ಲಕ್ಷ ರೂಪಾಯಿ ಪರಿಹಾರವನ್ನು ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ನಿರ್ದೇಶನ ನೀಡಿದ್ದಾರೆ.
ಅಲ್ಲದೆ ರೈತರ ಸಾವಿಗೆ ಸಂಬಂಧಪಟ್ಟಂತೆ ಶೀಘ್ರವೇ ಮಾಹಿತಿಯನ್ನು ಸಂಗ್ರಹಿಸಿ ವರದಿ ನೀಡುವಂತೆಯೂ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಬರದಿಂದ ಕಂಗಾಲಾಗಿರುವ ರಾಜ್ಯದಲ್ಲಿ ಸುಮಾರು 70 ರೈತರು ಸಾವನ್ನಪ್ಪಿರುವುದಾಗಿ ಟಿಡಿಪಿ ಅನಾವಶ್ಯಕವಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದಾಗಿ ರೆಡ್ಡಿ ಈ ಸಂದರ್ಭದಲ್ಲಿ ದೂರಿದರು.