ಜಮ್ಮು-ಕಾಶ್ಮೀರದ ಎಲ್ಲಾ ಜನತೆಯ ಹಕ್ಕುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಅಲ್ಲಿನ ಸರ್ಕಾರಕ್ಕೆ ಅಗತ್ಯ ಸಲಹೆ, ಸೂಚನೆ, ಸಹಕಾರ ನೀಡುವುದಾಗಿ ಪ್ರಧಾನಿ ಮನಮೋಹನ್ ಸಿಂಗ್ ಭರವಸೆ ನೀಡಿದ್ದಾರೆ.
ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ ಒಂದು ವರ್ಷದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಶಾಂತಿಯುತವಾಗಿ ಹಾಗೂ ಯಶಸ್ವಿಯಾಗಿ ನಡೆಸಿದ್ದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂವಿಧಾನದಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುವುದಾಗಿ ಹೇಳಿದ ಅವರು ಅಲ್ಲಿನ ಎಲ್ಲಾ ವರ್ಗದವರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ ಎಂದಿದ್ದಾರೆ. ಅಲ್ಲದೆ ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.