ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನನ್ನನ್ನು ಹುದ್ದೆಯಿಂದ ಕೆಳಗಿಳಿಸಲು ಕಾರಣವೇನು: ಖಂಡೂರಿ ಪ್ರಶ್ನೆ (Jaswant Singh | Arun Shourie | Uttarakhand | BC Khanduri | Rajnath Singh | L K Advani)
 
PTI
ಬಿಜೆಪಿ ನಾಯಕತ್ವದ ವಿರುದ್ಧ ಜಸ್ವಂತ್ ಸಿಂಗ್ ಮತ್ತು ಅರುಣ್ ಶೌರಿ ಟೀಕೆಯ ನಂತರ, ಇದೀಗ ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಬಿ.ಸಿ.ಖಂಡೂರಿ, ಪಕ್ಷದ ರಾಷ್ಟ್ರಾಧ್ಯಕ್ಷರಿಗೆ ಪತ್ರ ಬರೆದು ತಮ್ಮನ್ನು ಹುದ್ದೆಯಿಂದ ಕೆಳಗಿಳಿಸಲು ಕಾರಣವೇನು ಎಂಬುದನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಳಲ್ಲಿ, ಬಿಜೆಪಿ ಪಕ್ಷ ಉತ್ತರಖಂಡದಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲು ವಿಫಲವಾಗಿದ್ದರಿಂದ ತಮ್ಮನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ಪಕ್ಷದ ನಿರ್ಧಾರದ ಹಿಂದಿನ ಕಾರಣಗಳನ್ನು ಬಹಿರಂಗಪಡಿಸುವಂತೆ ರಾಷ್ಟ್ರಾಧ್ಯಕ್ಷ ರಾಜ್‌ನಾಥ್ ಸಿಂಗ್ ಅವರಿಗೆ ಒತ್ತಾಯಿಸಿದ್ದಾರೆ.

"ಪಕ್ಷದ ನಾಯಕರು ತಮ್ಮ ನಿರ್ಧಾರವನ್ನು ಪುನರ್‌ಪರಿಶೀಲಿಸುವುದು ಉತ್ತಮ. ತಮ್ಮನ್ನು ಬಲಿಪಶುವನ್ನಾಗಿ ಮಾಡಿ ಅಧಿಕಾರದಿಂದ ದೂರವಿಡಲಾಗಿದೆ" ಎಂದು ಖಂಡೂರಿ ಪಕ್ಷದ ನಾಯಕತ್ವದ ವಿರುದ್ಧ ಕಿಡಿ ಕಾರಿದ್ದಾರೆ.

ತಮ್ಮನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ಪಕ್ಷದ ಹೈಕಮಾಂಡ್ ನಿರ್ಧರವನ್ನು ಕಟುವಾಗಿ ಟೀಕಿಸಿದ ಅವರು, ತಮಗೆ ಹಲವಾರು ಬಿಜೆಪಿ ಶಾಸಕರ ಬೆಂಬಲವಿದೆ. ಈಗಾಗಲೇ 27 ಶಾಸಕರು ತಮಗೆ ಬೇಷರತ್ತಾಗಿ ಬೆಂಬಲ ಸೂಚಿಸಿದ್ದಾರೆ ಎಂದು ಹೈತಮಾಂಡ್‌ಗೆ ಎಚ್ಚರಿಕೆಯನ್ನು ರವಾನಿಸಿದ್ದಾರೆ.

ಬಿಜಿಪಿಯಲ್ಲಿನ ಬೆಳವಣಿಗೆಗಳ ಕುರಿತಂತೆ ಮಾತನಾಡಿದ ಖಂಡೂರಿ, ಬಿಜೆಪಿಯಲ್ಲಿನ ಬದ್ಧತೆ ಪಕ್ಷದ ಶಿಸ್ತು, ದೇಶಭಕ್ತಿ, ಪಕ್ಷದ ಮೇಲಿನ ಜನತೆಯ ವಿಶ್ವಾಸ ಮಾಯವಾಗಿರುವುದು ಕಳವಳಕ್ಕೆ ಕಾರಣವಾಗಿದೆ, ಪಕ್ಷ ಹಿಂದಿನ ವೈಭವವನ್ನು ಮರಳಿ ಪಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಮಾಜಿ ಪ್ರದಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಅನಾರೋಗ್ಯದಿಂದಾಗಿ ರಾಜಕೀಯ ನಿವೃತ್ತಿ ಹೊಂದಿದ ನಂತರ ಪಕ್ಷದ ನೀತಿಗಳಲ್ಲಿ ಬದಲಾವಣೆಗೆ ಕಾರಣವಾಗಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಖಂಡೂರಿ, ಹೌದು ಕೆಲ ಮಟ್ಟಿಗೆ ಪರಿಣಾಮವಾಗಿದೆ ಎಂದು ನುಡಿದರು.

ಪಕ್ಷದ ಹಿರಿಯ ನಾಯಕ ಅಡ್ವಾಣಿ ಮತ್ತು ರಾಷ್ಟ್ರಾಧ್ಯಕ್ಷ ರಾಜ್‌ನಾಥ್ ಸಿಂಗ್ ಅವರ ಮೇಲೆ ಅರುಣ್ ಶೌರಿ ವಾಗ್ದಾಳಿ ನಡೆಸುವುದರೊಂದಿಗೆ ಬಿಜಿಪಿಯಲ್ಲಿನ ಬಿಕ್ಕಟ್ಟು ಮತ್ತಷ್ಟು ತಾರಕಕ್ಕೇರಿದೆ. ಇದೀಗ ಅದಕ್ಕೆ ಖಂಡೂರಿ ಬಂಡಾಯ ಸೇರ್ಪಡೆಯಾಗಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ