ಪಕ್ಷದೊಳಗೆ ಆಂತರಿಕ ಭಿನ್ನಮತ ಹೆಚ್ಚಿರುವ ನಿಟ್ಟಿನಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಅವರು ಸೆಪ್ಟೆಂಬರ್ನಲ್ಲಿ ಹಮ್ಮಿಕೊಂಡಿದ್ದ ತಮ್ಮ ರಥಯಾತ್ರೆಯನ್ನು ಮುಂದೂಡಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಮತ್ತು ಮೂರು ರಾಜ್ಯಗಳಲ್ಲಿ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಪಕ್ಷ ಸಂಘಟನೆ ಮತ್ತು ಬಲವರ್ಧನೆಗಾಗಿ ರಾಷ್ಟ್ರಾದ್ಯಂತ ರಥಯಾತ್ರೆ ಹಮ್ಮಿಕೊಂಡಿದ್ದರು.
ಮಹಾರಾಷ್ಟ್ರ, ರಾಜಸ್ಥಾನ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೂ ಮುನ್ನ ಆಡ್ವಾಣಿ ಅವರು ರಥಯಾತ್ರೆ ನಡೆಸಲಿದ್ದು, ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿ ಪಕ್ಷವನ್ನು ಬಲಪಡಿಸಲು ಕಾರ್ಯತಂತ್ರಗಳನ್ನು ರೂಪಿಸಲಾಗುವುದು ಎಂಬುದಾಗಿ ಮೂಲಗಳು ಹೇಳಿವೆ.