ಇಲ್ಲಿನ ಗಾಂಧಿ ಮ್ಯೂಸಿಯಂ ಸಮೀಪ ಮಂಗಳವಾರ ಬಾಂಬ್ ಸ್ಫೋಟ ಸಂಭವಿಸಿದ್ದು, 60ರ ಹರೆಯದ ಮಹಿಳೆಯೊಬ್ಬರು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಪ್ರಬಲ ಸ್ಫೋಟ ಸಂಭವಿಸಿದ್ದು ಮತ್ತಷ್ಟು ಹಾನಿ ಸಂಭವಿಸಿರುವ ಸಾಧ್ಯತೆಗಳಿದ್ದು ಹೆಚ್ಚಿನ ಮಾಹಿತಿಗಳು ತಕ್ಷಣಕ್ಕೆ ಲಭ್ಯವಾಗಿಲ್ಲ.
ಮಧುರೈಗೆ ರಾಹುಲ್ ಗಾಂಧಿ ಭೇಟಿ ನಿಗದಿಯಾಗಿದ್ದು ಇದಕ್ಕೆ ಕೆಲವೇ ಗಂಟೆಗಳ ಮುಂಚಿತವಾಗಿ ಈ ಸ್ಫೋಟ ಸಂಭವಿಸಿದೆ. ಗಾಂಧಿ ಮ್ಯೂಸಿಯಂನಲ್ಲಿ ರಾಹುಲ್ ಗಾಂಧಿ ಅವರ ಸಭೆ ನಿಗದಿಯಾಗಿತ್ತು.
ಪೊಲೀಸರು ಸ್ಥಳಕ್ಕೆ ಆಗಮಿಸಿರುವುದಾಗಿ ಪ್ರಾಥಮಿಕ ವರದಿಗಳು ತಿಳಿಸಿವೆ. ರಾಹುಲ್ ಗಾಂಧಿ ತಮಿಳ್ನಾಡಿನಲ್ಲಿ ಪಕ್ಷ ಬಲವರ್ಧನೆಯ ಗುರಿ ಹಮ್ಮಿಕೊಂಡಿದ್ದು ಈ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದಾರೆ.