ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಭ್ರಷ್ಟ ಅಧಿಕಾರಿಗಳ ಆಸ್ತಿ ಮುಟ್ಟುಗೋಲು ಹಾಕಿ: ಸಿಜೆಐ (Chief Justice of India | Government Officials | Illegal Assets)
ಭ್ರಷ್ಟಾಚಾರ ಪ್ರಕರಣಗಳಲ್ಲಿ ದೋಷಿಗಳೆಂದು ತೀರ್ಮಾನಿಸಲ್ಪಟ್ಟಿರುವ ಸರ್ಕಾರಿ ಅಧಿಕಾರಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಶಾಸನಾತ್ಮಕ ನಿಬಂಧನೆಯ ಕುರಿತು ಭಾರತೀಯ ಮುಖ್ಯನ್ಯಾಯಾಧೀಶ ಕೆ.ಜಿ. ಬಾಲಕೃಷ್ಣನ್ ಒಲವು ವ್ಯಕ್ತಪಡಿಸಿದ್ದಾರೆ.
ಇದಲ್ಲದೆ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ಕುರಿತು ಕಾನೂನು ಕಟ್ಟಲೆ ನಡೆಸಲು ತಜ್ಞ ವಕೀಲರ ತಂಡಹನ್ನು ರೂಪಿಸಬೇಕು ಎಂಬ ಅಭಿಪ್ರಾಯವನ್ನು ಬಾಲಕೃಷ್ಣನ್ ಸೂಚಿಸಿದ್ದಾರೆ.
"ಸಾರ್ವಜನಿಕ ಅಧಿಕಾರಿಗಳು ಸಾರ್ವಜನಿಕರ ಹಣದಲ್ಲಿ ಅಕ್ರಮ ಆಸ್ತಿಯನ್ನು ಸಂಪಾದಿಸುತ್ತಾರೆಂದಾದಲ್ಲಿ, ಅವರ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವುದು ಸಮರ್ಥನೀಯ" ಎಂಬುದಾಗಿ ಮುಖ್ಯನ್ಯಾಯಾಧೀಶರು ಹೇಳಿದ್ದಾರೆ. ಅವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಅಪರಾಧಗಳ ವಿರುದ್ಧ ಹೋರಾಟ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.