ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಿಹಾರ ಉಪಚುನಾವಣೆ: ನಿತೀಶ್ ಕುಮಾರ್‌ಗೆ ಭಾರೀ ಹಿನ್ನಡೆ (RJD-LJP | Bihar | by-polls | JD-U)
 
ಬಿಹಾರದಲ್ಲಿ ಇತ್ತೀಚೆಗೆ ನಡೆದಿರುವ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 18 ಸ್ಥಾನಗಳಲ್ಲಿ ಆರ್‍‌ಜೆಡಿ-ಎಲ್‌ಜೆಪಿ ಮೈತ್ರಿಕೂಟ 8 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಆಡಳಿತಾರೂಢ ಜೆಡಿ-ಯು ತೀವ್ರ ಹಿನ್ನಡೆ ಅನುಭವಿಸಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಎರಡು ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಅದರ ಮಿತ್ರಪಕ್ಷ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಇದೇವೇಳೆ ಕಾಂಗ್ರೆಸ್ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ತಲಾ ಒಂದೊಂದು ಸ್ಥಾನಗಳನ್ನು ಗೆದ್ದುಕೊಂಡಿವೆ.

ಕೆಲವು ಕ್ಷೇತ್ರಗಳ ಫಲಿತಾಂಶ ಇನ್ನಷ್ಟೆ ಹೊರಬೀಳಬೇಕಿದ್ದು, ಆರ್‌ಜೆಡಿ ಒಂದು ಕ್ಷೇತ್ರ ಹಾಗೂ ಜೆಡಿಯು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜ್ಯದಲ್ಲಿ 18 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಸೆಪ್ಟೆಂಬರ್ 10ರಂದು ಮೊದಲ ಹಂತದಲ್ಲಿ ಏಳು ಸ್ಥಾನಗಳಿಗೆ ಮತ್ತು ಸೆಪ್ಟೆಂಬರ್ 15ರಂದು ದ್ವಿತೀಯ ಹಂತದಲ್ಲಿ 11 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

ಮುಂದಿನ ವರ್ಷ ಇಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಈ ಉಪಚುನಾವಣೆಯನ್ನು ನಿತೀಶ್ ಕುಮಾರ್ ಸರ್ಕಾರಕ್ಕೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ