ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರಾಷ್ಟ್ರಪತಿ ಪುತ್ರನಿಗೆ ಕಾಂಗ್ರೆಸ್ ಟಿಕೆಟ್: ದೇಶಮುಖ್ ಬಂಡಾಯ (Maharashtra | Ashok Chavan | Rajendrasingh Shekhawat | Deshmukh)
 
PTI
ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪುತ್ರ ರಾಜೇಂದ್ರ ಶೆಖಾವತ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಮೂಲಕ ಕುಟುಂಬ ರಾಜಕೀಯವನ್ನು ಮುಂದುವರಿಸಿದ್ದು, ಅದಕ್ಕೆ ಕಾಂಗ್ರೆಸ್‌ನ ಸಚಿವ ಸುನಿಲ್ ದೇಶಮುಖ್ ಬಂಡಾಯದ ಬಾವುಟ ಹಾರಿಸುವ ಮೂಲಕ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಅಕ್ಟೋಬರ್ 13ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ರಾಜೇಂದ್ರ ಶೆಖಾವತ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಆದರೆ ಇದನ್ನು ವಿರೋಧಿಸಿರುವ ಸಚಿವ ಸುನಿಲ್ ದೇಶಮುಖ್ ತಾವು ಕೂಡ ಅಖಾಡಕ್ಕೆ ಇಳಿದಿದ್ದಾರೆ. ಇದು ಪಕ್ಷದ ಶಿಸ್ತು ಉಲ್ಲಂಘನೆ ಎಂದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗುರುವಾರ ತಿಳಿಸಿದ್ದಾರೆ.

'ರಾಜೇಂದ್ರ ಶೆಖಾವತ್ ಪಕ್ಷದ ಅಧಿಕೃತ ಅಭ್ಯರ್ಥಿ ತಾವು ದಯವಿಟ್ಟ ಅವರ ವಿರುದ್ಧ ಸ್ಪರ್ಧೆಗೆ ಇಳಿಯಬೇಡಿ ಎಂದು ಮನವಿ ಮಾಡಿಕೊಂಡರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಆ ಹಿನ್ನೆಲೆಯಲ್ಲಿ ಸುನಿಲ್ ದೇಶಮುಖ್ ವಿರುದ್ಧ ಪಕ್ಷ ಶಿಸ್ತುಕ್ರಮ ಕೈಗೊಳ್ಳಲಿದೆ' ಎಂದು ಹೇಳಿದರು.

ಕಳೆದ ಹತ್ತು ವರ್ಷಗಳಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಮರಾವತಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸುನಿಲ್ ದೇಶಮುಖ್, 2004ರಲ್ಲಿ ನಡೆದ ಚುನಾವಣೆಯಲ್ಲಿ 32ಸಾವಿರ ಮತಗಳ ಅಂತರದಿಂದ ಜಯ ಸಾಧಿಸಿದ್ದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಬುಧವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಅಮರಾವತಿ ಕ್ಷೇತ್ರದಿಂದ ಹಾಲಿ ರಾಷ್ಟ್ರಪತಿ ಪಾಟೀಲ್ ಅವರ ಪುತ್ರ ಶೆಖಾವತ್‌ಗೆ ಟಿಕೆಟ್ ನೀಡಲಾಗಿತ್ತು. ಆದರೆ ಹೀಗೆ ಟಿಕೆಟ್ ನೀಡಲು ಸಚಿವ ಹಾಗೂ ಈ ಕ್ಷೇತ್ರದಲ್ಲಿ ಸತತ 4ಬಾರಿ ಗೆದ್ದಿರುವ ಸುನಿಲ್ ಅವರನ್ನು ಬಲಿಪಶುವನ್ನಾಗಿ ಮಾಡಿರುವುದು ವಿರೋಧಕ್ಕೆ ಕಾರಣವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ