ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಜಾತಿ ಆಧಾರಿತ ಪಂಚಾಯ್ತಿಯೊಂದು ದಲಿತ ಮಹಿಳೆ ಹಾಗೂ ಆಕೆಯ ಪ್ರೇಮಿ ವಿರುದ್ಧ ಕಂಡಲ್ಲಿ ಗುಂಡಿಕ್ಕಲು ಆದೇಶ ಹೊರಡಿಸಿದೆ. ಜಿಲ್ಲೆಯ ಅಲ್ಡಿ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ನಡೆದ ಪಂಚಾಯ್ತಿ ಸದಸ್ಯರ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಗಂಡನನ್ನು ಕಳೆದುಕೊಂಡ ದಲಿತ ಮಹಿಳೆ ತನ್ನದೇ ಸಮುದಾಯಕ್ಕೆ ಸೇರಿದ ವಿವಾಹಿತ ಯುವಕನನ್ನು ಪ್ರೀತಿಸುತ್ತಿದ್ದು, ಇದು ಪಂಚಾಯ್ತಿಯ ಕೆಂಗಣ್ಣಿಗೆ ಕಾರಣವಾಗಿದೆ.