ಹೈದರಾಬಾದ್, ಮಂಗಳವಾರ, 29 ಸೆಪ್ಟೆಂಬರ್ 2009( 12:44 IST )
ಆಂಧ್ರಪ್ರದೇಶದ ಮುಖ್ಯಮಂತ್ರಿಯನ್ನಾಗಿ ವೈಎಸ್ಆರ್ ಪುತ್ರ ಜಗನ್ ಮೋಹನ್ ರೆಡ್ಡಿ ಅವರನ್ನೇ ಮಾಡಬೇಕೆಂಬ ಕೂಗು ಮತ್ತೊಮ್ಮೆ ಭುಗಿಲೆದ್ದಿದೆ.
ಜಗನ್ ಮೋಹನ್ ಅವರನ್ನೇ ಮುಖ್ಯಮಂತ್ರಿಗಾದಿಯಲ್ಲಿ ಕೂರಿಸಬೇಕೆಂದು ಒತ್ತಾಯಿಸಿ ಜಗನ್ ಅಭಿಮಾನಿಗಳು ಎರಡು ಸರ್ಕಾರಿ ಬಸ್‌ಗಳಿಗೆ ಬೆಂಕಿ ಹಚ್ಚಿದ ಘಟನೆ ಭಾನುವಾರ ರಾಜಮಂಡ್ರಿಯಲ್ಲಿ ನಡೆದಿದೆ.
ವೈ.ಎಸ್.ರಾಜಶೇಖರ ರೆಡ್ಡಿ ಅವರ ಮರಣದ ಬೆನ್ನಲ್ಲೇ ಪುತ್ರ ಜಗನ್ ಅವರನ್ನೇ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಬೇಕೆಂಬ ಒತ್ತಾಯ ಬಲವಾಗತೊಡಗಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿತ್ತು. ಬಳಿಕ ಹೈಕಮಾಂಡ್ ಮಾತುಕತೆ, ಬೆಂಬಲಿಗರ ಮನವೊಲಿಕೆಯ ನಂತರ ರೋಸಯ್ಯ ಅವರನ್ನು ಹಂಗಾಮಿ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು.
ಆದರೆ ಇದೀಗ ಜಗನ್ ಬೆಂಬಲಿಗರು ಮತ್ತೆ ತಮ್ಮ ಬೇಡಿಕೆಯನ್ನು ಮುಂದಿಟ್ಟು ಪ್ರತಿಭಟನೆಗೆ ಮುಂದಾಗಿದ್ದಲ್ಲದೆ, ಬಸ್‌ಗೆ ಬೆಂಕಿ ಹಚ್ಚುವ ಮೂಲಕ ಪರಿಸ್ಥಿತಿ ಬಿಗಡಾಯಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.