ವಿದೇಶಿ ಬ್ಯಾಂಕುಗಳಲ್ಲಿ ಕಪ್ಪು ಹಣ ಇಟ್ಟಿರುವ ಕುರಿತು ಮಹತ್ವದ ದಾಖಲೆಗಳನ್ನು ಬಹಿರಂಗಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಬಹಿರಂಗಪಡಿಸುತ್ತಿಲ್ಲ ಎಂದು ಆರೋಪಿಸಿ ಖ್ಯಾತ ನ್ಯಾಯವಾದಿ ರಾಮ್ ಜೇಠ್ಮಲಾನಿ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ನಡುವೆ ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಹ್ಮಣ್ಯಂ ಅವರು ಈ ಪ್ರಕರಣದ ವಸ್ತುಸ್ಥಿತಿ ಕುರಿತ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್ ನೇತೃತ್ವದ ಪೀಠದ ಎದುರು ಹಾಜರುಪಡಿಸಿದ್ದಾರೆ.