ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪ್ರವಾಹ: ಅ.21ಕ್ಕೆ ಕೇಂದ್ರದ ಅಧ್ಯಯನ ತಂಡ ರಾಜ್ಯಕ್ಕೆ (Central team | Karnataka | flood | damage)
Feedback Print Bookmark and Share
 
ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಿರುವ ಹಾನಿಯ ಕುರಿತು ಮೂರು ದಿನಗಳ ಕಾಲ ಅಧ್ಯಯನ ನಡೆಸಲು ಕೇಂದ್ರದ ತಂಡವು ಅಕ್ಟೋಬರ್ 21ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದೆ.

ಯೋಜನಾ ಆಯೋಗದ ಅಧಿಕಾರಿಗಳಲ್ಲದೆ, ತಂಡದಲ್ಲಿ ಕೃಷಿ, ಹಣಕಾಸು, ರಸ್ತೆ ಸಾರಿಗೆ, ಗ್ರಾಮೀಣಾಭಿವೃದ್ಧಿ, ಇಂಧನ ಹಾಗೂ ಜಲಸಂಪನ್ಮೂಲ ಹಾಗೂ ಸಹಕಾರ ಸಚಿವಾಲಯದ ಅಧಿಕಾರಿಗಳು ಇರಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೆಂದೂ ಕಂಡು ಕೇಳರಿಯದಂತೆ ಬಂದೆರಗಿರುವ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೇಂದ್ರವು ಹತ್ತು ಸಾವಿರ ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಪ್ರವಾಹ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರವಾಹ ಪೀಡಿತ ಕರ್ನಾಟಕ ಹಾಗೂ ಆಂಧ್ರಕ್ಕೆ ತಲಾ ಸಾವಿರ ಕೋಟಿ ರೂಪಾಯಿಗಳ ಪರಿಹಾರ ಘೋಸಿದ್ದಾರೆ. ಇದಲ್ಲದೆ ಪ್ರವಾಹ ಕುರಿತ ವರದಿಯನ್ನು ಸಲ್ಲಿಸಿದ ಬಳಿಕ ಹೆಚ್ಚುವರಿ ಸಹಾಯ ನೀಡುವ ಭರವಸೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ